varthabharthi

ಬೆಂಗಳೂರು

'ವ್ಯಾಕರಣದ ಮೇಸ್ಟ್ರೇ....': ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್

ವಾರ್ತಾ ಭಾರತಿ : 9 Jul, 2019

ಬೆಂಗಳೂರು, ಜು. 9: ‘ವ್ಯಾಕರಣದ ಮೇಸ್ಟ್ರೇ ಆ ಕೆಲವು ಶಾಸಕರು ರಾಜೀನಾಮೆ ನೀಡಿರುವುದು ತಮ್ಮ ಶಾಸಕ ಸ್ಥಾನಕ್ಕೆ, ತಮ್ಮ ಪಕ್ಷಕ್ಕಲ್ಲ(ಕಾಂಗ್ರೆಸ್ಸಿಗೆ ಅಲ್ಲ)’ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಸುರೇಶ್ ಕುಮಾರ್, ಸಿದ್ದರಾಮಯ್ಯ ಕಾಲೆಳೆದಿದ್ದಾರೆ.

ಶಾಸಕರ ರಾಜೀನಾಮೆ ಹೇಗೆ ಪಕ್ಷಾಂತರ ವಿರೋಧಿ ಕಾಯ್ದೆ ಉಲ್ಲಂಘನೆ ಆಗುತ್ತದೆ? ಅವರ ವಿರುದ್ಧ ಯಾವುದೇ ಕ್ರಮ ಸಾಧ್ಯವೇ? ಎಂದು ಸುರೇಶ್ ಕುಮಾರ್ ಟ್ವಿಟ್ಟರ್ ಮೂಲಕ ಸಿದ್ದರಾಮಯ್ಯನವರನ್ನು ಪ್ರಶ್ನಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)