varthabharthi

ಕ್ರೀಡೆ

ಭಾರತ-ನ್ಯೂಝಿಲ್ಯಾಂಡ್ ಸೆಮಿ ಫೈನಲ್‌ ಪಂದ್ಯ ಬುಧವಾರಕ್ಕೆ ಮುಂದೂಡಿಕೆ

ವಾರ್ತಾ ಭಾರತಿ : 9 Jul, 2019

ಮ್ಯಾಂಚೆಸ್ಟರ್, ಜು.9: ಭಾರತ ಹಾಗೂ ನ್ಯೂಝಿಲ್ಯಾಂಡ್ ನಡುವೆ ಮಂಗಳವಾರ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಮೀಸಲು ದಿನವಾದ ಬುಧವಾರಕ್ಕೆ ಮುಂದೂಡಲಾಗಿದೆ.

ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಾಗ ನ್ಯೂಝಿಲ್ಯಾಂಡ್ 46.1 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 211 ರನ್ ಗಳಿಸಿದೆ. ರಾಸ್ ಟೇಲರ್(ಔಟಾಗದೆ 67, 85 ಎಸೆತ, 3 ಬೌಂಡರಿ, 1 ಸಿಕ್ಸರ್) ಹಾಗೂ ಟಾಮ್ ಲಥಾಮ್(ಔಟಾಗದೆ 3)ಕ್ರೀಸ್ ಕಾಯ್ದುಕೊಂಡಿದ್ದರು. ಕಿವೀಸ್ ಸ್ಪರ್ಧಾತ್ಮಕ ಮೊತ್ತದತ್ತ ಸಾಗುತ್ತಿದ್ದಾಗ ಮಳೆ ಆಗಮಿಸಿ ಪಂದ್ಯ ಸ್ಥಗಿತಗೊಂಡಿದೆ.

 ನ್ಯೂಝಿಲ್ಯಾಂಡ್ ಬುಧವಾರ ತನ್ನ ಬ್ಯಾಟಿಂಗ್ ಮುಂದುವರಿಸಲಿದೆ. ಬುಧವಾರದ ಪಂದ್ಯದಲ್ಲೂ ಫಲಿತಾಂಶ ಬಾರದಿದ್ದರೆ 10 ತಂಡಗಳಿದ್ದ ಗ್ರೂಪ್ ಹಂತದ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿರುವ ಭಾರತ ಫೈನಲ್‌ಗೆ ತೇರ್ಗಡೆಯಾಗಲಿದೆ.

ಈಗಾಗಲೇ ಈ ವಿಶ್ವಕಪ್‌ನಲ್ಲಿ ನಾಲ್ಕು ಪಂದ್ಯಗಳು ಮಳೆಗಾಹುತಿಯಾಗಿ ದಾಖಲೆ ನಿರ್ಮಾಣವಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)