varthabharthi

ಕ್ರೀಡೆ

ಸುನೀಲ್ ಚೆಟ್ರಿ, ಆಶಾಲತಾ ದೇವಿಗೆ ಎಐಎಫ್‌ಎಫ್ ಪ್ರಶಸ್ತಿ

ವಾರ್ತಾ ಭಾರತಿ : 10 Jul, 2019

  ಹೊಸದಿಲ್ಲಿ, ಜು.9: ಭಾರತದ ಪುರುಷರ ಫುಟ್ಬಾಲ್ ತಂಡದ ನಾಯಕ ಸುನೀಲ್ ಚೆಟ್ರಿ ಅವರು ಎಐಎಫ್‌ಎಫ್ ವರ್ಷದ ಆಟಗಾರ ಮತ್ತು ಮಹಿಳಾ ಫುಟ್ಬಾಲ್ ತಂಡದ ಅಶಾಲತಾ ದೇವಿ ವರ್ಷದ ಆಟಗಾರ್ತಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ.

ಚೆಟ್ರಿ ರವಿವಾರ ನಾಲ್ಕು ರಾಷ್ಟ್ರಗಳ ಇಂಟರ್‌ಕಾಂಟಿನೆಂಟಲ್ ಕಪ್ ಫುಟ್ಬಾಲ್ ಟೂರ್ನಿಯ ಮೊದಲ ಪಂದ್ಯದಲ್ಲಿ ತಜಕಿಸ್ತಾನ ವಿರುದ್ಧ ಅವಳಿ ಗೋಲು ದಾಖಲಿಸುವ ಮೂಲಕ ಅರ್ಜೆಂಟೀನದ ಸ್ಟಾರ್ ಆಟಗಾರ ಲಿಯೊನೆಲ್ ಮೆಸ್ಸಿ ದಾಖಲೆಯನ್ನು ಮುರಿದಿದ್ದಾರೆ. ಅಂತರ್‌ರಾಷ್ಟ್ರೀಯ ಗೋಲುಗಳ ಸಂಖ್ಯೆಯನ್ನು 70ಕ್ಕೆ ಏರಿಸುವ ಮೂಲಕ ಚೆಟ್ರಿ ಗರಿಷ್ಠ ಗೋಲು ದಾಖಲಿಸಿದ ವಿಶ್ವದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಪೋರ್ಚುಗಲ್‌ನ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಬಳಿಕ ಚೆಟ್ರಿ ಗರಿಷ್ಠ ಗೋಲ್ ಗಳಿಸಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)