varthabharthi

ಬೆಂಗಳೂರು

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

ವಾರ್ತಾ ಭಾರತಿ : 10 Jul, 2019

ಬೆಂಗಳೂರು, ಜು.10: ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ.

ಐಎಂಎ ವಂಚನೆ ಪ್ರಕರಣ ಸಂಬಂಧ ಸಿಟ್ ತನಿಖಾಧಿಕಾರಿಗಳ ವಶದಲ್ಲಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್ ಅವರ ಸ್ಥಾನಕ್ಕೆ ಯುವ ಸಬಲೀಕರಣ ಹಾಗೂ ಕ್ರೀಡಾ ಆಯುಕ್ತ ಕೆ.ಶ್ರೀನಿವಾಸ ಅವರನ್ನು ಸರಕಾರ ನೇಮಿಸಿದೆ.

ಅದೇ ರೀತಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಲಕ್ಷ್ಮೀಕಾಂತ್ ರೆಡ್ಡಿ ಜಿ. ಅವರನ್ನು ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ನೇಮಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)