ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಅವರು ಕುಮಾರ ಕೃಪ ಅತಿಥಿ ಗೃಹದಲ್ಲಿ ಮೈತ್ರಿ ನಾಯಕರ ಸಭೆಯಲ್ಲಿ ಈ ಬಗ್ಗೆ ಹೇಳಿಕೆ ನೀಡಿದರು. ಯಡಿಯೂರಪ್ಪ ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ವೇಳೆ ಏನೇನು ನಡೆದಿದೆ ಎಂಬುದನ್ನು ನೆನಪು ಮಾಡಿಕೊಳ್ಳಬೇಕು. 2009ರಲ್ಲಿ ಇದೇ ಪರಿಸ್ಥಿತಿ ಇದ್ದಾಗ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರ ಎಂದು ಕುಮಾರಸ್ವಾಮಿ ಇದೇ ವೇಳೆ ಪ್ರತಿಕ್ರಿಯೆ ನೀಡಿದರು.
Next Story