varthabharthi

ಕರಾವಳಿ

ಜು.13 ರಂದು ಕ್ರೈಸ್ತರಿಗಾಗಿ ಜನಸ್ಪಂದನಾ ಕಾರ್ಯಕ್ರಮ

ವಾರ್ತಾ ಭಾರತಿ : 11 Jul, 2019

ಉಡುಪಿ, ಜು.11: ಇಂಡಿಯನ್ ಕ್ರಿಶ್ಚಿಯನ್ ಯೂನಿಯನ್ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಜನಸ್ಪಂದನಾ ಕಾರ್ಯಕ್ರಮವನ್ನು ಜು.13 ರಂದು ಮಧ್ಯಾಹ್ನ 3ಗಂಟೆಗೆ ಉಡುಪಿ ಮಿಶನ್ ಕಂಪೌಂಡ್ ಬಳಿಯ ಸಿಎಸ್‌ಐ ಬಾಯ್ಸಾ ಬೋರ್ಡಿಂಗ್ ಹೋಮ್‌ನಲ್ಲಿ ಆಯೋಜಿಸಲಾಗಿದೆ.

ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಉಪಸ್ಥಿತಿಯಲ್ಲಿ ಉಡುಪಿ ಕ್ರೈಸ್ತ ಧರ್ಮ ಪ್ರಾಂತ್ಯದ ಕ್ರೈಸ್ತ ಸಮಾಜ ಬಾಂಧವರಿಗಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಐಸಿಯುನ ಸಹಕಾರ್ಯದರ್ಶಿ ಸ್ಟೀವನ್ ಕುಲಾಸೊ ಉದ್ಯಾವರ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳಿಂದ ಇಲಾಖಾ ಯೋಜನೆಗಳ ಸೂಕ್ತ ಮಾಹಿತಿ, ಶಾಸಕರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ, ಸ್ಥಳದಲ್ಲಿ ಸಮಸ್ಯೆ ಗಳ ಪರಿಹಾರ ಮತ್ತು ಮಾರ್ಗದರ್ಶನ ನೀಡಲಾಗುವುದು. ಅದೇ ರೀತಿ ಚಿಕಿತ್ಸಾ ವೆಚ್ಚಕ್ಕೆ ಅರ್ಹರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸಹಾಯ ಪಡೆಯ ಬಹುದಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಸುನೀಲ್ ಕಬ್ರಾಲ್ ಶಿರ್ವ, ಕಾರ್ಯದರ್ಶಿ ಚಾರ್ಲ್ಸ್ ಆಂಬ್ಲರ್, ಉಪಾಧ್ಯಕ್ಷ ಮೆಲ್ವಿನ್ ಡಿಸೋಜ, ಡಿಯೋನ್ ಡಿಸೋಜ, ಶೀಲಾ ಜತ್ತನ್ನ ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)