varthabharthi

ಕರಾವಳಿ

ಗಾಂಜಾ ಮಾರಾಟ: ಇಬ್ಬರು ಯುವಕರ ಬಂಧನ

ವಾರ್ತಾ ಭಾರತಿ : 11 Jul, 2019

ಮಂಗಳೂರು, ಜು.11: ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಯುವಕರನ್ನು ತಲಪಾಡಿ ಹಳೆ ಚೆಕ್ ಪೋಸ್ಟ್ ಬಳಿ ಗುರುವಾರ ಇಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಮಾಸ್ತಿಕಟ್ಟೆ ಉಳ್ಳಾಲ ನಿವಾಸಿ ಇಬ್ರಾಹೀಂ ಸುಫೈದ್ (22), ಹಳೆಕೋಟೆ ಉಳ್ಳಾಲ ನಿವಾಸಿ ಅಬ್ದುಲ್ ಅಫೀಲ್ (21) ಬಂಧಿತ ಆರೋಪಿಗಳು.

ಮಂಗಳೂರು ನಗರದ ತಲಪಾಡಿ ಹಳೆ ಚೆಕ್‌ಪೋಸ್ಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದರು. ಆರೋಪಿಗಳಿಂದ ಸುಮಾರು 500 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಆಕ್ಟಿವಾ ಹೋಂಡಾ, ಮೊಬೈಲ್ ಪೋನ್‌ನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೀಗಣೇಶ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದ ಇಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಕೃಷ್ಣ ಕೆ.ಕೆ. ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)