varthabharthi

ಕರಾವಳಿ

ಜು.12ರಂದು ವಿಶ್ವ ಪರಿಸರ ದಿನಾಚರಣೆ

ವಾರ್ತಾ ಭಾರತಿ : 11 Jul, 2019

ಮಂಗಳೂರು, ಜು.11: ದ.ಕ. ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ, ಅರಣ್ಯ ಇಲಾಖೆ, ಮಂಗಳೂರು ಸ್ಮಾರ್ಟ್‌ಸಿಟಿ ಲಿ., ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ವಿವಿಧ ಸಂಘಟನೆಗಳ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ, ಪರಿಸರ ಜಾಥಾ ಹಾಗೂ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭವು ಜು.12ರಂದು ನಡೆಯಲಿದೆ.

ಪರಿಸರ ಜಾಥಾ ಬೆಳಗ್ಗೆ 9 ಗಂಟೆಗೆ ಮಂಗಳಾ ಕ್ರೀಡಾಂಗಣದಿಂದ ಆರಂಭವಾಗಲಿದೆ. ಬೆಳಗ್ಗೆ 10 ಗಂಟೆಗೆ ಟಿಎಂಎ ಪೈ ಕನ್ವೆನ್ಷನ್ ಹಾಲ್‌ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)