varthabharthi

ಕರಾವಳಿ

ಜು.16: ಜಿಲ್ಲಾಮಟ್ಟದ ಯುವ ಸಂಸತ್ ಕಾರ್ಯಕ್ರಮ

ವಾರ್ತಾ ಭಾರತಿ : 11 Jul, 2019

ಮಂಗಳೂರು : ವಿಶ್ವಸಂಸ್ಥೆ ಅಭಿವೃದ್ಧಿ ಯೋಜನೆ ಹಾಗೂ ಭಾರತ ಸರಕಾರದ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೇತೃತ್ವದಲ್ಲಿ ಯುವ ಸಂಸತ್ 2019ರ ಕಾರ್ಯಕ್ರಮದ ಭಾಗವಾಗಿ ದ.ಕ. ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮವು ಜು.16 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸಂಸತ್‌ನ ಕಾರ್ಯವಿಧಾನ ಹಾಗೂ ಜವಾಬ್ದಾರಿ ಮತ್ತು ಸರಕಾರದ ಆಡಳಿತ ಅಭಿವೃದ್ಧಿ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿ ರಾಜಕೀಯ ವಿಚಾರಧಾರೆಗಳ ಬಗ್ಗೆ ಅರಿವು ಮೂಡಿಸಲಾಗುವುದು.

ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಉದ್ಘಾಟಿಸಲಿದ್ದಾರೆ. ನೆಹರೂ ಯುವಕೇಂದ್ರದ ರಾಜ್ಯ ನಿರ್ದೇಶಕ ಅತುಲ್ ನಿಕಮ್, ವಿಶ್ವಸಂಸ್ಥೆಯ ಅಭಿವೃದ್ಧಿ ಯೋಜನೆಯ ದಿಲ್ಲಿಯ ಪ್ರತಿನಿಧಿ ಅಂಕಿತ್ ಜೈಸ್ವಾಲ್ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ನೆಹರೂ ಯುವಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ರಘುವೀರ್ ಸೂಟರ್‌ಪೇಟೆ ಪ್ರಕಟನೆ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)