varthabharthi

ಕರ್ನಾಟಕ

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

ವಾರ್ತಾ ಭಾರತಿ : 11 Jul, 2019

ಬೆಂಗಳೂರು, ಜು.11: ಸಮ್ಮಿಶ್ರ ಸರಕಾರದ ಭವಿಷ್ಯ ಆತಂಕದ ಸ್ಥಿತಿಯ ನಡುವೆಯು ಇಬ್ಬರು ಐಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.

ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕಿಯಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ(ಬೆಂಗಳೂರು) ಆಯುಕ್ತೆಯಾಗಿ ಹಾಗೂ ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಪೆದ್ದಪ್ಪಯ್ಯರನ್ನು ಕ್ರೀಡಾ ಇಲಾಖೆ(ಬೆಂಗಳೂರು) ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಅದೇಶಿಸಿದೆ

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)