varthabharthi

ಬೆಂಗಳೂರು

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಶಾಸಕಿ ಸೌಮ್ಯಾರೆಡ್ಡಿ

ವಾರ್ತಾ ಭಾರತಿ : 11 Jul, 2019

ಬೆಂಗಳೂರು, ಜು.11: ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಸಿಎಲ್‌ಪಿ ಸಭೆಗೂ ಹೋಗಿದ್ದೆ. ನಾಳೆ ಅಧಿವೇಶನಕ್ಕೂ ಹೋಗುತ್ತೇನೆಂದು ಜಯನಗರ ಶಾಸಕಿ ಸೌಮ್ಯಾರೆಡ್ಡಿ ಸ್ಪಷ್ಟಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಂದ ಕಾಂಗ್ರೆಸ್ ಸಂಕಷ್ಟದಲ್ಲಿದೆ. ಪಕ್ಷವನ್ನು ಉಳಿಸಿಕೊಳ್ಳಿ ಎಂದು ಸೋನಿಯಾಗಾಂಧಿ ಹೇಳಿದ್ದಾರೆ. ನಾನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯಾಗಿದ್ದೇನೆ. ಹೀಗಾಗಿ ಸೋನಿಯಾ ಗಾಂಧಿ ಸದ್ಯದ ರಾಜಕೀಯ ಪರಿಸ್ಥಿತಿಯ ಕುರಿತು ಮಾತನಾಡಿದ್ದಾರೆ ಎಂದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂಬುದು ಸುಳ್ಳು ಸುದ್ದಿಯಾಗಿದೆ. ಆದರೆ, ನನ್ನ ತಂದೆ ರಾಮಲಿಂಗಾರೆಡ್ಡಿ ಕೆಲವು ಭಿನ್ನಾಭಿಪ್ರಾಯಗಳ ಕಾರಣದಿಂದಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಅವರಿಗೆ ಸದ್ಯದ ರಾಜಕೀಯ ಪರಿಸ್ಥಿತಿಯನ್ನು ಕಂಡು ತೀವ್ರ ಬೇಸರವಾಗಿದೆ ಎಂದು ಅವರು ಹೇಳಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)