varthabharthi


ಗಲ್ಫ್ ಸುದ್ದಿ

ದುಬೈ: ಜು.19ರಂದು ಬೃಹತ್ ರಕ್ತದಾನ ಶಿಬಿರ

ವಾರ್ತಾ ಭಾರತಿ : 14 Jul, 2019

ದುಬೈ: ಡಿ.ಕೆ.ಎಸ್.ಸಿ ಇದರ 20ನೇ ವಾರ್ಷಿಕೋತ್ಸವದ ಪ್ರಚಾರಾರ್ಥ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಯು.ಎ.ಇ ಯೂತ್ ವಿಂಗ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಸಹಭಾಗಿತ್ವದಲ್ಲಿ ಜು.19ರಂದು ಬೆಳಗ್ಗೆ 9 ರಿಂದ  ಲತೀಫಾ ಆಸ್ಪತ್ರೆ ಹೂದ್ ಮೆಹ್ತಾ ದುಬೈಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ಕಾರ್ಯಕ್ರಮದಲ್ಲಿ ಧಾರ್ಮಿಕ ನೇತಾರರು ಹಾಗೂ ಉದ್ಯಮಿಗಳು ಮತ್ತು ಯು.ಎ.ಇ ಅನಿವಾಸಿ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕರಾದ ಡಿ.ಕೆ.ಎಸ್.ಸಿ ಯೂತ್ ವಿಂಗ್ ಯು.ಎ.ಇ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ಯು.ಎ.ಇ ಕಾರ್ಯ ನಿರ್ವಾಹಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಶಂಸುದ್ದೀನ್ ಪಿಲಿಗೂಡು +971528981904, ಸಮದ್ ಬಿರಾಲಿ +971553540287 ಸಂಪರ್ಕಿಸಬಹುದು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)