varthabharthi

ರಾಷ್ಟ್ರೀಯ

ಅಸ್ಸಾಂ ನೆರೆ: ಸಾವಿನ ಸಂಖ್ಯೆ 15ಕ್ಕೆ ಏರಿಕೆ

ವಾರ್ತಾ ಭಾರತಿ : 16 Jul, 2019

ಅಸ್ಸಾಂ, ಜು. 16: ಅಸ್ಸಾಂ ಹಾಗೂ ನೈಋತ್ಯ ರಾಜ್ಯಗಳಲ್ಲಿ ನೆರೆ ಪರಿಸ್ಥಿತಿ ಮಂಗಳವಾರ ತೀವ್ರಗೊಂಡಿದೆ.

ನೆರೆಯಿಂದಾಗಿ ಮರಿಗಾಂವ್, ಗೋಲಪಾರ ಹಾಗೂ ಹೈಲಕಂಡಿಯಲ್ಲಿ ತಲಾ ಒಬ್ಬರಂತೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ನೆರೆಯಿಂದ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ರಾಜ್ಯದ 33 ಜಿಲ್ಲೆಗಳಲ್ಲಿ ಒಟ್ಟು 4.28 ದಶಲಕ್ಷ ಜನರು ಸಂತ್ರಸ್ತರಾಗಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ.

ನೆರೆ ಸಂತ್ರಸ್ತ 83,000 ಜನರನ್ನು 494 ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ರಾಜ್ಯದಲ್ಲಿ ನೆರೆ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಮಿಝೋರಾಂನಲ್ಲಿ ಮಳೆ ಸಂಬಂಧಿ ವಿಪತ್ತುಗಳಿಗೆ ಇದುವರೆಗೆ 6 ಮಂದಿ ಮೃತಪಟ್ಟಿದ್ದಾರೆ. ತ್ರಿಪುರಾದಲ್ಲಿ ಕಳೆದ 15 ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಮಳೆ ಸಂಬಂಧಿ ಘಟನೆಗಳಿಂದ ಇಬ್ಬರು ಮೃತಪಟ್ಟಿದ್ದಾರೆ ಹಾಗೂ 6 ಮಂದಿ ಗಾಯಗೊಂಡಿದ್ದಾರೆ. 3000ಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ ಎಂದು ತ್ರಿಪುರಾ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ವರದಿ ಹೇಳಿದೆ.

ಅರುಣಾಚಲ ಪ್ರದೇಶದ ಪೂರ್ವ ಸಿಯಾಂಗ್, ಲೋಹಿತ್, ಲೋವರ್ ದಿಬಾಂಗ್ ವ್ಯಾಲಿ, ನಮಸೈ ಹಾಗೂ ಚಂಗ್ಲಾಂದ್ ಜಿಲ್ಲೆಗಳ ಹಲವು ಪ್ರದೇಶಗಳು ಜಲಾವೃತವಾಗಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)