varthabharthi

ಕರ್ನಾಟಕ

ರೋಷನ್‌ ಬೇಗ್ ಮನವೊಲಿಕೆಗೆ ನದೀಮ್ ಜಾವೇದ್ ಆಗಮನ

ವಾರ್ತಾ ಭಾರತಿ : 17 Jul, 2019

ಬೆಂಗಳೂರು, ಜು.17: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರೋಷನ್‌ಬೇಗ್‌ರನ್ನು ಮನವೊಲಿಕೆ ಮಾಡುವ ನಿಟ್ಟಿನಲ್ಲಿ ಎಐಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ನದೀಮ್ ಜಾವೇದ್ ಹೊಸದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.

ಗುರುವಾರ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡುತ್ತಿರುವುದರಿಂದ ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ಹಿಂಪಡೆಯುವಂತೆ ಮಾಡಲು ಕಾಂಗ್ರೆಸ್‌ನಿಂದ ಕೊನೆಯ ಹಂತದ ಪ್ರಯತ್ನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರೋಷನ್‌ ಬೇಗ್‌ರನ್ನು ಮನವೊಲಿಸಲು ಎಐಸಿಸಿ ನದೀಮ್ ಜಾವೇದ್ ಆಗಮಿಸಿದ್ದಾರೆ ಎನ್ನಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)