varthabharthi

ಬೆಂಗಳೂರು

ರಾಜೀನಾಮೆ ಹಿಂಪಡೆದು, ವಿಶ್ವಾಸಮತದ ಪರವಾಗಿ ಮತ ಚಲಾಯಿಸುತ್ತೇನೆ: ರಾಮಲಿಂಗಾರೆಡ್ಡಿ

ವಾರ್ತಾ ಭಾರತಿ : 18 Jul, 2019

ಬೆಂಗಳೂರು, ಜು.17: 'ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆಯುತ್ತೇನೆ ಹಾಗೂ ವಿಶ್ವಾಸಮತದ ಪರವಾಗಿ ಮತ ಚಲಾಯಿಸುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಜು.18 ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಲಿರುವ ಹಿನ್ನೆಲೆಯಲ್ಲಿ ಈಗಾಗಲೇ ಕಾಂಗ್ರೆಸ್ ನ ಎಲ್ಲಾ ಶಾಸಕರಿಗೆ ವಿಪ್ ಜಾರಿಯಾಗಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಾಗಿನಿಂದ ತಮ್ಮ ನಡೆ ಬಗ್ಗೆ ಕುತೂಹಲ ಕಾಯ್ದುಕೊಂಡಿದ್ದ ರಾಮಲಿಂಗಾ ರೆಡ್ಡಿಯನ್ನು ಮನವೊಲಿಸಲು ಕಾಂಗ್ರೆಸ್​ ನಾಯಕರು ಭಾರೀ ಪ್ರಯತ್ನ ಪಟ್ಟಿದ್ದರು. ಆದರೆ, ರಾಮಲಿಂಗಾ ರೆಡ್ಡಿ ರಾಜೀನಾಮೆ ಹಿಂಪಡೆಯುವ ಬಗ್ಗೆ ಮಾತ್ರ ಸ್ಪಷ್ಟ ನಿರ್ಧಾರ ತಿಳಿಸಿರಲಿಲ್ಲ. ಬದಲಾಗಿ ಪಕ್ಷವನ್ನು ಬಿಡುವುದಿಲ್ಲ ಎನ್ನುವ ಮೂಲಕ ಕಾಂಗ್ರೆಸ್​ ನಲ್ಲಿಯೇ ಉಳಿಯಲಿದ್ದೇನೆ ಎಂದು ತಿಳಿಸಿದ್ದರು. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)