varthabharthi

ಕ್ರೀಡೆ

ಇಂಗ್ಲೆಂಡ್ ಪರ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಲು ರಾಯ್ ಸಜ್ಜು

ವಾರ್ತಾ ಭಾರತಿ : 18 Jul, 2019

ಲಂಡನ್, ಜು.17: ಆರಂಭಿಕ ಬ್ಯಾಟ್ಸ್‌ಮನ್ ಜೇಸನ್ ರಾಯ್ ಮೊದಲ ಬಾರಿ ಇಂಗ್ಲೆಂಡ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬುಧವಾರ ಲಾರ್ಡ್ಸ್‌ನಲ್ಲಿ ಆರಂಭವಾಗಲಿರುವ ಐರ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

 ರವಿವಾರ ಕೊನೆಗೊಂಡಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ರಾಯ್ ಒಟ್ಟು 443 ರನ್ ಗಳಿಸಿ ಮಿಂಚಿದ್ದರು. 28ರ ಹರೆಯದ ರಾಯ್ ಸರ್ರೆ ಸಹ ಆಟಗಾರ ರೊರಿ ಬರ್ನ್ಸ್ ಅವರೊಂದಿಗೆ ಬ್ಯಾಟಿಂಗ್ ಆರಂಭಿಸುವ ನಿರೀಕ್ಷೆಯಿದೆ. ತನ್ನ ಚೊಚ್ಚಲ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಆಗಸ್ಟ್ 1 ರಿಂದ ಆಸ್ಟ್ರೇಲಿಯ ವಿರುದ್ಧ ಆರಂಭವಾಗಲಿರುವ ಆ್ಯಶಸ್ ಸರಣಿಯಲ್ಲಿ ಸ್ಥಾನ ಪಡೆಯಲು ಆಯ್ಕೆಗಾರರ ಗಮನ ಸೆಳೆಯಲು ಬಯಸಿದ್ದಾರೆ.

 ಸಮರ್‌ಸೆಟ್ ಆಲ್‌ರೌಂಡರ್ ಲೂವಿಸ್ ಗ್ರೆಗೊರಿ ಟೆಸ್ಟ್ ತಂಡದಲ್ಲಿ ಮೊದಲ ಬಾರಿ ಸ್ಥಾನ ಪಡೆದಿದ್ದಾರೆ. ವೇಗದ ಬೌಲರ್ ಒಲ್ಲಿ ಸ್ಟೋನ್ ತಂಡಕ್ಕೆ ವಾಪಸಾಗಿದ್ದಾರೆ.

ಇಂಗ್ಲೆಂಡ್‌ನ ಗರಿಷ್ಠ ವಿಕೆಟ್ ಸರದಾರ ಜೇಮ್ಸ್ ಆ್ಯಂಡರ್ಸನ್ ತಂಡದಲ್ಲಿದ್ದಾರೆ. ಇಂಗ್ಲೆಂಡ್ ವಿಶ್ವಕಪ್ ವಿಜೇತ ತಂಡದ ಸದಸ್ಯರಾದ ಜೋಸ್ ಬಟ್ಲರ್ ಹಾಗೂ ಬೆನ್ ಸ್ಟೋಕ್ಸ್‌ಗೆ ಐರ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)