ಈಶಾನ್ಯ ಭಾರತದಲ್ಲಿ ಭೂಕಂಪ
ಶಿಲಾಂಗ್, ಜು.19: ಅರುಣಾಚಲ ಪ್ರದೇಶ, ಅಸ್ಸಾಂ ಹಾಗೂ ಇತರ ಈಶಾನ್ಯ ಭಾರತದಲ್ಲಿ ಶುಕ್ರವಾರ ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.
ಗುವಾಹಟಿ, ಅಸ್ಸಾಂನ ಕೆಲವು ಪ್ರದೇಶಗಳಲ್ಲಿ, ನಾಗಾಲ್ಯಾಂಡ್ನ ದಿಮಾಪುರ ಹಾಗೂ ಇತರ ಪ್ರದೇಶಗಳಲ್ಲಿ ಮಧ್ಯಾಹ್ನ 2.52 ಗಂಟೆಗೆ ಭೂಕಂಪ ಸಂಭವಿಸಿದೆ. ಸಾವು ನೋವಿನ ಬಗ್ಗೆ ಇದುವರೆಗೆ ಮಾಹಿತಿಯಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಜಿಲ್ಲೆಯಲ್ಲಿ 10 ಕಿ.ಮೀ. ಆಳದಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತು ಎಂದು ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ.
Next Story