ನಿಮ್ಮ ಅಂಕಣ
ಮುಲ್ಲರಪಟ್ಣ ಸೇತುವೆ ಪುನರ್ ನಿರ್ಮಿಸಿ
ಮಾನ್ಯರೇ,
ಮಂಗಳೂರು ಹಾಗೂ ಬಂಟ್ವಾಳ ತಾಲೂಕುಗಳ ಪ್ರಮುಖ ಸಂಪರ್ಕಕೊಂಡಿಯಾಗಿದ್ದ ಮುಲ್ಲರಪಟ್ಣ ಸೇತುವೆ ಕುಸಿದು ಒಂದು ವರ್ಷವೇ ಕಳೆದಿದೆ. ಆದರೆ ಇದುವರೆಗೂ ನೂತನ ಸೇತುವೆ ನಿರ್ಮಾಣ ಕಾರ್ಯ ಆರಂಭವಾಗಿಲ್ಲ. ಇದರಿಂದ ಅವಳಿ ತಾಲೂಕಿನ ಸಾರ್ವಜನಿಕರು ಸಾರಿಗೆ ವ್ಯವಸ್ಥೆಯಲ್ಲಿ ತೊಂದರೆ ಅನುಭವಿಸುವಂತಾಗಿದೆ.
ಈ ಸೇತುವೆಯು ಮಂಗಳೂರು ಹಾಗೂ ಬಂಟ್ವಾಳ ತಾಲೂಕುಗಳ ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ಆದರೆ, ಈ ಸೇತುವೆ ಕುಸಿದು ಬಿದ್ದಿದ್ದು, ಹೀಗಾಗಿ ಇಲ್ಲಿನ ವೃದ್ಧರು, ನಾಗರಿಕರು ಹಾಗೂ ಶಾಲಾ ಮಕ್ಕಳು ದಿನನಿತ್ಯ ಸಂಕಷ್ಟದ ಜೀವನ ಎದುರಿಸುವ ಪರಿಸ್ಥಿತಿ ಉಂಟಾಗಿದೆ. ಇಲ್ಲಿ ಸೇತುವೆ ನಿರ್ಮಾಣದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ರಾಜೇಶ್ ನಾಯ್ಕೆ, ಭರತ್ ಶೆಟ್ಟಿಯವರಲ್ಲೂ ಮನವಿ ಮಾಡಿದ್ದರೂ ಇಲ್ಲಿಯವರೆಗೆ ಸೇತುವೆ ಪುನರ್ ನಿರ್ಮಿಸುವ ಕಾರ್ಯಕ್ಕೆ ಮುಂದಾಗಿಲ್ಲ. ಈ ನಿಟ್ಟಿನಲ್ಲಿ ಸಂಸದರು, ಶಾಸಕರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ, ಶೀಘ್ರವೇ ಸೇತುವೆ ಕಾಮಗಾರಿಯನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ