varthabharthi

ಕರ್ನಾಟಕ

ರಾಜ್ಯಪಾಲರಿಂದ ಕೇಂದ್ರ ಗೃಹ ಕಾರ್ಯದರ್ಶಿಗೆ ವರದಿ ಸಲ್ಲಿಕೆ

ವಾರ್ತಾ ಭಾರತಿ : 20 Jul, 2019

ಬೆಂಗಳೂರು, ಜು.20: ರಾಜ್ಯ ರಾಜಕೀಯ ಬೆಳವಣಿಗೆಯ ಬಗ್ಗೆ ರಾಜ್ಯಪಾಲ ವಜೂಬಾಯ್ ವಾಲಾ ಕೇಂದ್ರ ಗೃಹ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದಾರೆ.

ರಾಜಭವನದ ಅಧಿಕಾರಿಗಳು ಸದನದಲ್ಲಿ ಉಪಸ್ಥಿತರಿದ್ದು ಸಂಪೂರ್ಣ ವರದಿ ತಯಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಶ್ವಾಸಮತ ಸಾಬೀತುಪಡಿಸಲು  ಎರಡು ಬಾರಿ ಸೂಚನೆ ನೀಡಿದರೂ, ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ತಮ್ಮ  ಸೂಚನೆಯನ್ನು ಕಡೆಗಣಿಸಿದ್ದಾರೆಂದು ರಾಜ್ಯಪಾಲರು ಕೇಂದ್ರಕ್ಕೆ ನೀಡಿರುವ ವರದಿಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ,

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)