varthabharthi

ಕರಾವಳಿ

ಸಾಲಿಗ್ರಾಮ: ಓದುಗ ತಿಂಗಳು ಕಾರ್ಯಕ್ರಮ

ವಾರ್ತಾ ಭಾರತಿ : 23 Jul, 2019

ಉಡುಪಿ, ಜು.23: ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಸಾಲಿಗ್ರಾಮ ಶಾಖಾ ಗ್ರಂಥಾಲಯದಲ್ಲಿ ಕೇಂದ್ರದ ನೀತಿ ಆಯೋಗದ ಸೂಚನೆಯಂತೆ ಸಾರ್ವಜನಿಕರಲ್ಲಿ ಓದುವ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಓದುಗ ತಿಂಗಳು ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಾಲಾ ಮಟ್ಟದಿಂದ ಕಾಲೇಜು ಮಟ್ಟದವರೆಗೆ ವಿವಿರ್ಸ್ಪೆಗಳನ್ನು ಆಯೋಜಿಸಲಾಗಿತ್ತು.

ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅರುಣ್ ಕುಮಾರ್, ಸಾಲಿಗ್ರಾಮದ ನಿವೃತ್ತ ಪ್ರಾಂಶುಪಾಲ ಶ್ರೀನಿವಾಸ ಸೋಮಯಾಜಿ ಇವರು ಮಾತನಾಡಿದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾ ಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಾಲಿಗ್ರಾಮ ಶಾಖಾ ಗ್ರಂಥಾಲಯದ ಗ್ರಂಥಾಲಯ ಸಹಾಯಕಿ ಶ್ಯಾಮಲ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)