varthabharthi

ಬೆಂಗಳೂರು

ಎಚ್‌ಎಸ್‌ವಿ ಸೇರಿ ಮೂವರಿಗೆ ಸಂಸ್ಕೃತಿ ಸಿರಿ ಪ್ರಶಸ್ತಿ

ವಾರ್ತಾ ಭಾರತಿ : 9 Aug, 2019

ಬೆಂಗಳೂರು, ಆ.8: ಡಾ.ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನದ ‘ಸಂಸ್ಕೃತಿ ಸಿರಿ’ ಪ್ರಶಸ್ತಿಗೆ ಸಾಹಿತಿ ಎಚ್.ಎಸ್.ವೆಂಕಟೇಶಮೂರ್ತಿ, ಜಾನಪದ ಕಲಾವಿದೆ ಮಲ್ಲವ್ವ ಮ್ಯಾಗೇರಿ ಹಾಗೂ ಸಂಗೀತ ಕಲಾವಿದ ಬಿ.ವಿ.ಶ್ರೀನಿವಾಸ್ ಭಾಜನರಾಗಿದ್ದಾರೆ.

ಪ್ರಶಸ್ತಿ ಪ್ರದಾನವನ್ನು ಆ.18ರ ಸಂಜೆ 6 ಗಂಟೆಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದು, ಪುರಸ್ಕೃತರಿಗೆ 25 ಸಾವಿರ ರೂ.ಗಳ ಗೌರವ ಧನ, ಸ್ಮರಣಿಕೆ ಮತ್ತು ಫಲತಾಂಬೂಲ ನೀಡಿ ಗೌರವಿಸಲಾಗುತ್ತದೆ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕಾರ್ಯಕ್ರಮವನ್ನು ಹೈಕೋರ್ಟ್‌ನ ನಿವೃತ್ತ ನ್ಯಾ.ಎಂ.ಎನ್. ವೆಂಕಟಾಚಲಯ್ಯ ಉದ್ಘಾಟಿಸಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)