varthabharthi

ಬೆಂಗಳೂರು

ಸಿಎಂ ಪರಿಹಾರ ನಿಧಿಗೆ ಬಿಬಿಎಂಪಿ ಸದಸ್ಯರ ತಿಂಗಳ ಗೌರವಧನ

ವಾರ್ತಾ ಭಾರತಿ : 9 Aug, 2019

ಬೆಂಗಳೂರು, ಆ.9: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ನೆರವಾಗುವ ಉದ್ದೇಶದಿಂದ ಬಿಬಿಎಂಪಿಯ ಎಲ್ಲ ಸದಸ್ಯರು ಒಂದು ತಿಂಗಳ ಗೌರವಧನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಲಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಕಳೆದ 10 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಅಪಾರವಾದ ಆಸ್ತಿ-ಪಾಸ್ತಿ ನಷ್ಟವಾಗಿದೆ. ಹೀಗಾಗಿ, ಅಲ್ಲಿನ ಜನರಿಗೆ ಸ್ಪಂದಿಸುವ ಸಲುವಾಗಿ ಪಾಲಿಕೆ ಸದಸ್ಯರು ಒಕ್ಕೊರಲಿನಿಂದ ತೀರ್ಮಾನ ಮಾಡಿದ್ದು, ಎಲ್ಲರ ಒಂದು ತಿಂಗಳ ಗೌರವಧನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಲಾಗುವುದು ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಹೇಳಿದ್ದಾರೆ.

ನಗರದ ಕೃಷ್ಣರಾವ್ ಪಾರ್ಕ್‌ನಲ್ಲಿ ನಾಳೆ(ಆ.10) ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಬೇಕಿದ್ದ ಡಾ.ಶಿವಕುಮಾರ ಸ್ವಾಮೀಜಿ ಪ್ರತಿಮೆ ಅನಾವರಣ ಹಾಗೂ ಶೆಟಲ್ ಬ್ಯಾಡ್ಮಿಂಟನ್ ಕ್ರೀಡಾಂಗಣ ಉದ್ಘಾಟನೆ ಸಮಾರಂಭ, ಕಂಚಿನ ಪ್ರತಿಮೆ ಅನಾವರಣ ಹಾಗೂ ಮತ್ತಿತರೆ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)