varthabharthi

ಬೆಂಗಳೂರು

ಜನರ ಸಂಕಷ್ಟಕ್ಕೆ ನೆರವಾಗುವುದು ನನ್ನ ಆದ್ಯ ಕರ್ತವ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾ ಭಾರತಿ : 10 Aug, 2019

ಬೆಂಗಳೂರು, ಆ. 9: ‘ನಾನು ಆಡಳಿತ ಪಕ್ಷದಲ್ಲಿಯೇ ಇರಲಿ, ವಿರೋಧ ಪಕ್ಷದಲ್ಲಿಯೇ ಇರಲಿ, ಜನರ ಸಂಕಷ್ಟಕ್ಕೆ ನೆರವಾಗುವುದು ಆದ್ಯ ಕರ್ತವ್ಯವೆಂದು ನಂಬಿ ರಾಜಕಾರಣ ಮಾಡುತ್ತ ಬಂದವನು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

‘ಈ ಕಾರಣಕ್ಕಾಗಿಯೇ ನನ್ನ ಬದಲು ನನ್ನ ಮಗ, ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಅವರನ್ನು ಪ್ರವಾಹ ಸಂತ್ರಸ್ತರಿಗೆ ನೆರವಾಗುವಂತೆ ಕಳುಹಿಸಿದ್ದೇನೆ. ನಾಲ್ಕು ದಿನದ ಹಿಂದೆ ನಾನು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ವೈದ್ಯರು ಕೆಲವು ದಿನಗಳ ಕಡ್ಡಾಯ ವಿಶ್ರಾಂತಿಯನ್ನು ಸೂಚಿಸಿದ್ದಾರೆ.

ಈ ನಡುವೆ ಉತ್ತರ ಕರ್ನಾಟಕ ಭಾಗ ಪ್ರವಾಹಕ್ಕೆ ಸಿಲುಕಿ ನಲುಗಿ ಹೋಗಿದೆ, ಅಲ್ಲಿ ಹೋಗಿ ಪರಿಹಾರ ಕಾರ್ಯಗಳಲ್ಲಿ ಭಾಗವಹಿಸಬೇಕೆಂದು ಮನಸ್ಸು ತುಡಿಯುತ್ತಿದ್ದರೂ, ನನ್ನ ದುರಾದೃಷ್ಟಕ್ಕೆ ಅದು ಸಾಧ್ಯವಾಗುತ್ತಿಲ್ಲ’ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)