varthabharthi


ಕರಾವಳಿ

ಡೆಂಗ್ ಗೆ ಬಲಿಯಾದ ಪತ್ರಕರ್ತ ನಾಗೇಶ್ ಪಡು ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಸಿಎಂ ಯಡಿಯೂರಪ್ಪ ಘೋಷಣೆ

ವಾರ್ತಾ ಭಾರತಿ : 12 Aug, 2019

ಮಂಗಳೂರು, ಆ.12: ಡೆಂಗ್ ಜ್ವರದಿಂದ ಸಾವನ್ನಪ್ಪಿರುವ ಪತ್ರಕರ್ತ ನಾಗೇಶ್ ಪಡು ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಸರಕಾರದ ವತಿಯಿಂದ 5 ಲಕ್ಷ ರೂ. ಪರಿಹಾರ ಘೋಷಿಸಿದರು.

ಪ್ರವಾಹ ಪೀಡಿತ ಕರಾವಳಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ನಾಗೇಶ್ ಪಡು ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಮನವಿ ಸಲ್ಲಿಸಿದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿ ಅವರು ರಾಜ್ಯ ಸರಕಾರದ ವತಿಯಿಂದ 5 ಲಕ್ಷ ರೂ. ಪರಿಹಾರ ಘೋಷಿಸಿದರು.

ಈ ವೇಳೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು ಉಪಸ್ಥಿತರಿದ್ದರು.
 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)