varthabharthi


ಕರಾವಳಿ

ನೆರೆ ಸಂತ್ರಸ್ತರಿಗೆ ದ.ಕ. ಹಾಲು ಉತ್ಪಾದಕರ ಒಕ್ಕೂಟದಿಂದ ಪರಿಹಾರ

ವಾರ್ತಾ ಭಾರತಿ : 13 Aug, 2019

ಮಂಗಳೂರು, ಆ.13: ರಾಜ್ಯವು ಕಳೆದ ಕೆಲವು ದಿನಗಳಿಂದ ಸುರಿದ ವಿಪರೀತ ಮಳೆಯಿಂದ ಉಂಟಾಗಿರುವ ಪ್ರವಾಹದಿಂದ ತತ್ತರಿಸಿದೆ. ಸಾಕಷ್ಟು ರೈತರು, ಹೈನುಗಾರರು ಮನೆಮಠ, ಜಾನುವಾರುಗಳನ್ನು ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಪ್ರವಾಹ ಪೀಡಿತರಿಗೆ ನೆರವಾಗಲು ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಈಗಾಗಲೇ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರವಾಹಪೀಡಿತರಿಗೆ ನೆರವಾಗಲು ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ನಿರ್ಧರಿಸಿದೆ ಎಂದು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ತಿಳಿಸಿದ್ದಾರೆ.

ಪ್ರವಾಹ ಸಂತ್ರಸ್ತರಾಗುವ ನೆರವಾಗುವ ಉದ್ದೇಶದಿಂದ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳು ಉದಾರ ದೇಣಿಗೆಯನ್ನು ಒಕ್ಕೂಟಕ್ಕೆ ನೀಡಬೇಕು. ಒಕ್ಕೂಟದಿಂದ ಉದ್ಯೋಗಿಗಳ ಹಾಗೂ ಒಕ್ಕೂಟದ ವಂತಿಗೆಯನ್ನು ಕ್ರೋಢೀಕರಿಸಿ ಮುಖ್ಯಮಂತ್ರಿಯ ಪರಿಹಾರ ನಿಧಿಗೆ ನೀಡಲು ನಿರ್ಧರಿಸಲಾಗಿದೆ. ಇದಕ್ಕೆ ಸಹಕರಿಸುಂತೆ ರವಿರಾಜ ಹೆಗ್ಡೆ ಪ್ರಕಟನೆಯಲ್ಲಿ ಕೋರಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)