varthabharthi

ಕರ್ನಾಟಕ

ಪ್ರವಾಹ ಸಂತ್ರಸ್ತರಿಗೆ ಮನೆ ಕಟ್ಟಿಕೊಡದಿದ್ದರೆ ಸರಕಾರ ಉರುಳಿಸುತ್ತೇನೆ: ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ

ವಾರ್ತಾ ಭಾರತಿ : 13 Aug, 2019

ಬೆಳಗಾವಿ, ಆ.13: ಭಾರೀ ಪ್ರವಾಹದಲ್ಲಿ ಸಿಲುಕಿ ಮನೆ ಕಳೆದುಕೊಂಡಿರುವವರಿಗೆ ಹೊಸ ಮನೆ ಕಟ್ಟಿಸಿಕೊಡುವ ಜವಾಬ್ದಾರಿ ನಮ್ಮದು. ಪ್ರವಾಹಪೀಡಿತ ಜನರಿಗೆ ಮನೆ ಕಟ್ಟಿಸಿಕೊಡದಿದ್ದರೆ ಈ ಸರಕಾರವನ್ನೇ ಉರುಳಿಸುತ್ತೇನೆ ಎಂದು ಅರಭಾವಿ ಶಾಸಕ, ಬಿಜೆಪಿಯ ಬಾಲಚಂದ್ರ ಜಾರಕಿಹೊಳಿ ಅವರು ಯಡಿಯೂರಪ್ಪ ಸರಕಾರದ ವಿರುದ್ಧ ಗುಡುಗಿದ್ದಾರೆ.

ಸೋಮವಾರ ಘಟಪ್ರಭಾ ನದಿ ದಂಡೆಯ ಮೂಡಲಗಿ ತಾಲೂಕಿನ ತಿಗಡಿ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಸರಕಾರಕ್ಕೆ ಈ ಎಚ್ಚರಿಕೆ ನೀಡಿದ್ದಾರೆ.

ಬಾಲಚಂದ್ರ ಅವರ ಹೇಳಿಕೆ ಇರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)