varthabharthi


ರಾಷ್ಟ್ರೀಯ

ರಾಜ್ಯಸಭೆ ಚುನಾವಣೆ: ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಮನಮೋಹನ್ ಸಿಂಗ್

ವಾರ್ತಾ ಭಾರತಿ : 13 Aug, 2019

 ಜೈಪುರ, ಆ.13: ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕಾಗಿ ಇದೇ ತಿಂಗಳ 26 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಮಂಗಳವಾರ ಜೈಪುರದಲ್ಲಿ ನಾಮಪತ್ರ ಸಲ್ಲಿಸಿದರು.

86ರ ವಯಸ್ಸಿನ ಮನಮೋಹನ್ ಸಿಂಗ್‌ರನ್ನು ವಿಮಾನನಿಲ್ದಾಣದಲ್ಲಿ ಉಪ ಮುಖ್ಯಮಂತ್ರಿ ಹಾಗೂ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್ ಸ್ವಾಗತಿಸಿದರು.

ಬಿಜೆಪಿ ಮುಖ್ಯಸ್ಥ ಮದನ್‌ಲಾಲ್ ಸೈನಿ ನಿಧನದಿಂದ ತೆರವಾಗಿರುವ ರಾಜ್ಯಸಭೆ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.

ಡಾ.ಮನಮೋಹನ್ ಸಿಂಗ್ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದಲ್ಲಿ 10 ವರ್ಷಗಳ ಕಾಲ ಪ್ರಧಾನಿಯಾಗಿದ್ದರು. ಸಿಂಗ್ ಈ ಹಿಂದೆ ಅಸ್ಸಾಂನಿಂದ ರಾಜ್ಯಸಭೆಗೆ ಚುನಾಯಿತರಾಗಿದ್ದರು. ಅಸ್ಸಾಂನಿಂದ ಸಿಂಗ್‌ರನ್ನು ಮರು ಚುನಾಯಿಸುವಷ್ಟು ಸದಸ್ಯರು ಕಾಂಗ್ರೆಸ್‌ನಲ್ಲಿ ಈಗ ಇಲ್ಲವಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)