varthabharthi


ರಾಷ್ಟ್ರೀಯ

ಕಾರ್ಯಕ್ರಮದಲ್ಲಿ ನೂಕುನುಗ್ಗಾಟ: ಬಿಜೆಪಿ ರಾಜ್ಯಾಧ್ಯಕ್ಷರ ಕೈ ಬೆರಳು ತುಂಡು

ವಾರ್ತಾ ಭಾರತಿ : 13 Aug, 2019

ಹೊಸದಿಲ್ಲಿ, ಆ.13: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂದರ್ಭ ನಡೆದ ಅವಘಡವೊಂದರಲ್ಲಿ ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಮತ್ತು ರಾಜ್ಯ ಸಚಿವ ಸ್ವತಂತ್ರ ದೇವ್ ಸಿಂಗ್ ಅವರ ಕೈ ಬೆರಳು ತುಂಡಾಗಿದೆ.

ಮುಝಫ್ಫರ್ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿತ್ತು. ನೂಕುನುಗ್ಗಾಟ ನಡೆದ ವೇಳೆ ಸಿಂಗ್ ಅವರ ಕೈ ಕಾರಿಗೆ ಸಿಲುಕಿದ್ದು, ಬೆರಳು ತುಂಡಾಗಿದೆ. ಕೂಡಲೇ ಅವರನ್ನು ವರ್ಧಮಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈಗಾಗಲೇ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಬೆರಳಿಗೆ ಗಂಭೀರ ಗಾಯವಾದ ಕಾರಣ ಜೋಡಿಸಲು ಸಾಧ್ಯವಾಗುತ್ತಿಲ್ಲ ಎಂದು ವೈದ್ಯರು ಹೇಳಿದ್ದಾಗಿ ವರದಿಯಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)