varthabharthi


ಕರಾವಳಿ

ಆ.15: ಸ್ವಾಂತಂತ್ರ್ಯೋತ್ಸವ ಕವಿಗೋಷ್ಠಿ

ವಾರ್ತಾ ಭಾರತಿ : 13 Aug, 2019

ಮಂಗಳೂರು, ಆ.13: ದ.ಕ. ಜಿಲ್ಲಾ ಕಸಾಪ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸ್ವಾಂತಂತ್ರ್ಯೋತ್ಸವ ಕವಿಗೋಷ್ಠಿ-ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ಮಂಗಳೂರು ನಗರದ ಪುರಭವನದಲ್ಲಿ ಆ.15ರಂದು ಮಧ್ಯಾಹ್ನ 3 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಡಾ.ವಸಂತಕುಮಾರ ಪೆರ್ಲ ಉದ್ಘಾಟಿಸಲಿದ್ದು. ಜಿಲ್ಲಾ ಕನ್ನಡ ಸಾಹಿತ್ಯ ಅಧ್ಯಕ್ಷ ಎಸ್.ಪ್ರದೀಪಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಬ್ಯಾಂಡ್‌ನೊಂದಿಗೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ಕಸಾಪದಿಂದ ಡಾ.ವಸಂತಕುಮಾರ್ ಪೆರ್ಲ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.

ಕವಿಗಳಾದ ಅಕ್ಷಯ ಆರ್. ಶೆಟ್ಟಿ, ಸೋಮನಿಂಗ ಎಚ್. ಹಿಪ್ಪರಗಿ, ನಾಗರಾಜ್ ಖಾರ್ವಿ ಕಲ್ಮಂಜಿ, ಜಯಶ್ರೀ ಬಿ. ಕದ್ರಿ, ಮರಿಯನ್ ಪಿಯುಸ್ ಡಿಸೋಜ, ಸುರತ್ಕಲ್, ರಾಜೇಶ್ ಶೆಟ್ಟಿ ದೋಟ, ಕೆ.ಪಿ. ಅಬ್ದುಲ್ ಖಾದರ್ ಕುತ್ತೆತ್ತೂರು ಭಾಗವಹಿಸಲಿದ್ದಾರೆ.

ಆ ಬಳಿಕ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕೆನರಾ ಅಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಉರ್ವ ಇಲ್ಲಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮ ಹಾಗೂ ಕಾಲೇಜು ಶಿಕ್ಷಣ ಇಲಾಖೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿವೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದಿಂದ ದೇಶಭಕ್ತಿ ಗೀತಾ ಗಾನ ಸಂಭ್ರಮ ಕಾರ್ಯಕ್ರಮ ಜರಗಲಿವೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)