varthabharthi


ರಾಷ್ಟ್ರೀಯ

ವೈರಲ್ ಜ್ವರದಿಂದ ಬಳಲುತ್ತಿರುವ ಅಡ್ವಾಣಿ ನಿವಾಸದಲ್ಲಿ ಧ್ವಜಾರೋಹಣ ರದ್ದು

ವಾರ್ತಾ ಭಾರತಿ : 15 Aug, 2019

ಹೊಸದಿಲ್ಲಿ, ಆ.14: ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿಯವರು ತೀವ್ರ ವೈರಲ್ ಜ್ವರದಿಂದ ಬಳಲುತ್ತಿದ್ದು ಗುರುವಾರದಂದು ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಅವರ ನಿವಾಸದಲ್ಲಿ ನಡೆಯಬೇಕಿದ್ದ ಧ್ವಜಾರೋಹಣ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಅವರ ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ. ಕಳೆದ ಐದು ದಿನಗಳಿಂದ ಅಡ್ವಾಣಿಯವರು ವೈರಲ್ ಜ್ವರದಿಂದ ಬಳಲುತ್ತಿದ್ದಾರೆ. ಹಾಗಾಗಿ ಈ ಬಾರಿ ಹೊಸದಿಲ್ಲಿಯ ಪೃಥ್ವಿರಾಜ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಆಗಸ್ಟ್ 15ರಂದು ಧ್ವಜಾರೋಹಣ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಕಚೇರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 91ರ ಹರೆಯದ ಮಾಜಿ ಉಪಪ್ರಧಾನಿಯೂ ಆಗಿರುವ ಅಡ್ವಾಣಿಯವರು ಆಗಸ್ಟ್ 7ರಂದು ಸುಶ್ಮಾ ಸ್ವರಾಜ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಅವರ ನಿವಾಸಕ್ಕೆ ತೆರಳಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)