varthabharthi


ರಾಷ್ಟ್ರೀಯ

ರಾಜ್ಯಸಭೆಗೆ ಅವಿರೋಧ ಆಯ್ಕೆಯಾಗಲಿದ್ದಾರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ವಾರ್ತಾ ಭಾರತಿ : 15 Aug, 2019

ಜೈಪುರ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ಬಿಜೆಪಿ ಬುಧವಾರ ಪ್ರಕಟಿಸಿದೆ.

ಈ ತಿಂಗಳ 26ರಂದು ಉಪಚುನಾವಣೆ ನಡೆಯಲಿದ್ದು, ಬಿಜೆಪಿ ತನ್ನ ನಿರ್ಧಾರ ಘೋಷಿಸುವುದರೊಂದಿಗೆ ರಾಜ್ಯಸಭೆಗೆ ಮಾಜಿ ಪ್ರಧಾನಿ ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ.

"ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಬೇಕಾಗುವಷ್ಟು ಸಂಖ್ಯಾಬಲ ನಮ್ಮಲ್ಲಿಲ್ಲ" ಎಂದು 200 ಸದಸ್ಯ ಬಲದ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಗುಲಾಬ್‌ಚಂದ್ ಕಟಾರಿಯಾ ಹೇಳಿದ್ದಾರೆ.

ಬಿಜೆಪಿಯ ಈ ನಿರ್ಧಾರದಿಂದಾಗಿ ಸಿಂಗ್ ಸತತ ಆರನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಲಿದ್ದಾರೆ. ಈ ಮುನ್ನ ಐದು ಬಾರಿ ಅಸ್ಸಾಂನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

ಜೂನ್ ತಿಂಗಳಲ್ಲಿ ಬಿಜೆಪಿಯ ಮದಲ್‌ಲಾಲ್ ಸೈನಿ ಅವರ ನಿಧನದಿಂದಾಗಿ ಈ ಸ್ಥಾನ ತೆರವಾಗಿತ್ತು. ರಾಜಸ್ಥಾನದ ಒಟ್ಟು 10 ರಾಜ್ಯಸಭಾ ಸ್ಥಾನಗಳ ಪೈಕಿ ಒಂಬತ್ತು ಬಿಜೆಪಿ ವಶದಲ್ಲಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)