varthabharthi

ಗಲ್ಫ್ ಸುದ್ದಿ

ಕತರ್ ಇಂಡಿಯನ್ ಸೋಶಿಯಲ್ ಫೋರಂ ವತಿಯಿಂದ 'ಪ್ರಸಕ್ತ ರಾಜಕೀಯ ಸನ್ನಿವೇಶ' ಅಭಿಯಾನ

ವಾರ್ತಾ ಭಾರತಿ : 18 Aug, 2019

ದೋಹ: ಕತರ್ ಇಂಡಿಯನ್ ಸೋಶಿಯಲ್ ಫೋರಂ (ಕ್ಯೂಐಎಸ್ಎಫ್) ಕರ್ನಾಟಕ ರಾಜ್ಯ ವತಿಯಿಂದ ಪ್ರಸಕ್ತ ರಾಜಕೀಯ ಸನ್ನಿವೇಶ ಅಭಿಯಾನದ ಅಂಗವಾಗಿ ಬೃಹತ್ ಸಾರ್ವಜನಿಕ ಕಾರ್ಯಕ್ರಮವು ದೋಹದಲ್ಲಿ ಇತ್ತೀಚೆಗೆ ನಡೆಯಿತು.

ಪ್ರಸಕ್ತ ರಾಜಕೀಯ ಸನ್ನಿವೇಶದ ಬಗ್ಗೆ ಕ್ಯೂಐಎಸ್ಎಫ್ ರಾಜ್ಯ ಕಾರ್ಯದರ್ಶಿ ಫಸೀಉದ್ದೀನ್ ಮಾತನಾಡಿ, ಇಂದಿನ ರಾಜಕೀಯ ಪಕ್ಷಗಳು ಪರಸ್ಪರ ಕಚ್ಚಾಡಿಕೊಳ್ಳುವುದರಲ್ಲಿಯೇ ಮಗ್ನವಾಗಿದ್ದು, ಜನಸಾಮಾನ್ಯರ ಕಷ್ಟ-ಸುಖಗಳಿಗೆ ಸ್ಪಂದಿಸಲು ಒಂದು ಪರ್ಯಾಯ ರಾಜಕೀಯ ಪಕ್ಷದ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕ್ಯೂಐಎಸ್ಎಫ್ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಶೀರ್ ಅಹ್ಮದ್ ತಮಿಳುನಾಡು, ಕ್ಯೂಐಎಸ್ಎಫ್ ಕರ್ನಾಟಕ ರಾಜ್ಯಾಧ್ಯಕ್ಷ ಅಯ್ಯೂಬ್ ಉಳ್ಳಾಲ ಹಾಗೂ ಕರ್ನಾಟಕ ರಾಜ್ಯ ಶಾಖೆ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕ್ಯೂಐಎಸ್ಎಫ್ ರಾಜ್ಯಾಧ್ಯಕ್ಷ ನಝೀರ್ ಪಾಷಾ ಪ್ರಾಸ್ತಾವಿಕ ಮಾತನಾಡಿದರು. ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಝಕರಿಯಾ ಪಾಂಡೇಶ್ವರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭ ಸುಮಾರು 25 ಮಂದಿ ಕ್ಯೂಐಎಸ್ಎಫ್ ಸದಸ್ಯತ್ವವನ್ನು ಸ್ವೀಕರಿಸಿದರು. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)