varthabharthi

ಬೆಂಗಳೂರು

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಗಮದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋ.ರೂ.

ವಾರ್ತಾ ಭಾರತಿ : 19 Aug, 2019

ಬೆಂಗಳೂರು, ಆ.19: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಗಮದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.ಗಳ ಚೆಕ್ಕನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶ, ಮುಖ್ಯ ಅಭಿಯಂತರ ಲೊಕೇಶ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಲ್. ಕೆ. ಅತೀಕ್ ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)