ಕೈಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು,ಆ.19: ಸರಕಾರಿ ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ಐಎಂಸಿ ಕೋಟಾದಡಿ ವೃತ್ತಿಗಳಲ್ಲಿ ತರಬೇತಿ ಪಡೆಯಲು ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿಗೊಳಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸದಿರುವ ಅಭ್ಯರ್ಥಿಗಳು ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು.
ಕದ್ರಿ ಹಿಲ್ಸ್ನಲ್ಲಿರುವ ಸರಕಾರಿ ಮಹಿಳಾ ಐಟಿಐಯಲ್ಲಿ ಸಿಒಪಿಎ (ಕಂಪ್ಯೂಟರ್ ಅಪರೇಟರ್ ಆ್ಯಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್) (ತರಬೇತಿಯ ಅವಧಿ 2 ವರ್ಷ) ಮತ್ತು ಇಲೆಕ್ಟ್ರಾನಿಕ್ ಮೆಕ್ಯಾನಿಕ್ (ತರಬೇತಿಯ ಅವಧಿ 1 ವರ್ಷ)ಗೆ ಎಸೆಸ್ಸೆಲ್ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ದೂ.ಸಂ:0824-2216360/9845226485 ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story