varthabharthi

ಬೆಂಗಳೂರು

ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

ವಾರ್ತಾ ಭಾರತಿ : 20 Aug, 2019

ಬೆಂಗಳೂರು, ಆ.20: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 25 ದಿನಗಳ ಬಳಿಕ ರಾಜ್ಯ ಸರಕಾರದ ಸಚಿವ ಸಂಪುಟ ರಚನೆಯಾಗಿದೆ. 17 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ರಾಜಭವನದಲ್ಲಿ ನಡೆಯುತ್ತಿದೆ.

ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಗ್ಗೆ 10:30ಕ್ಕೆ ನಡೆದ ಸರಳ ಸಮಾರಂಭದಲ್ಲಿ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಬಿ.ಶ್ರೀರಾಮುಲು, ಎಸ್.ಸುರೇಶ್ ಕುಮಾರ್, ವಿ.ಸೋಮಣ್ಣ, ಸಿ.ಟಿ.ರವಿ, ಕೋಟ ಶ್ರೀನಿವಾಸ ಪೂಜಾರಿ, ಗೋವಿಂದ ಎಂ.ಕಾರಜೋಳ, ಡಾ.ಸಿ.ಎನ್.ಅಶ್ವಥ್ ನಾರಾಯಣ, ಲಕ್ಷ್ಮಣ್ ಸವದಿ, ಬಸವರಾಜ ಬೊಮ್ಮಾಯಿ, ಜೆ.ಸಿ.ಮಾಧುಸ್ವಾಮಿ, ಸಿ.ಸಿ.ಪಾಟೀಲ್, ಎಚ್.ನಾಗೇಶ್, ಪ್ರಭು ಚೌವ್ಹಾಣ್ ಹಾಗೂ ಶಶಿಕಲಾ ಜೊಲ್ಲೆ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಅಧಿಕಾರ ಮತ್ತು ಗೋಪ್ಯತಾ ಪ್ರಮಾಣ ವಚನ ಬೋಧಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)