varthabharthi

ರಾಷ್ಟ್ರೀಯ

ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲನಾಥ್ ಅವರ ಅಳಿಯ ರತುಲ್ ಪುರಿ ಬಂಧನ

ವಾರ್ತಾ ಭಾರತಿ : 20 Aug, 2019

 ಹೊಸದಿಲ್ಲಿ, ಆ.20: ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲನಾಥ್ ಅವರ ಅಳಿಯ ರತುಲ್ ಪುರಿ ಅವರನ್ನು 354 ಕೋ.ರೂ. ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ಬಂಧಿಸಿದೆ.

  ನಿಷ್ಕ್ರೀಯ ಎಲೆಕ್ಟ್ರಾನಿಕ್ ಸಂಸ್ಥೆ ಮೊಸೆರ್ ಬೇರ್‌ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಪುರಿ ಅವರನ್ನು ಸರಕಾರಿ ಸ್ವಾಮ್ಯದ ಸೆಂಟ್ರಲ್ ಬ್ಯಾಂಕ್ ನೀಡಿದ ದೂರಿನ ಮೇರೆಗೆ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಮೊಸೆರ್ ಬೇರ್ ಕಂಪೆನಿಯು 2009ರಿಂದ ವಿವಿಧ ಬ್ಯಾಂಕ್‌ಗಳಿಂದ ಸಾಲಪಡೆದಿದ್ದು, ಹಣವನ್ನು ದುರುಪಯೋಗಪಡಿಸಿಕೊಂಡಿತ್ತು. ಪುರಿ ಹಾಗೂ ಇತರ ನಾಲ್ವರು ಮಾಜಿ ನಿರ್ದೇಶಕರು ನಕಲಿ ದಾಖಲೆಗಳನ್ನು ನೀಡಿ ಸೆಂಟ್ರಲ್ ಬ್ಯಾಂಕ್‌ಗೆ 354 ಕೋ.ರೂ. ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)