varthabharthi

ಕರಾವಳಿ

ಉಡುಪಿ: ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

ವಾರ್ತಾ ಭಾರತಿ : 20 Aug, 2019

ಉಡುಪಿ, ಆ.20: ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ಜಿ.ಜಗದೀಶ್ ಇಂದು ಬೆಳಗ್ಗೆ ಅಧಿಕಾರ ಸ್ವೀಕರಿಸಿದರು.
 ನಿರ್ಗಮನ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿಯವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

ಕೋಲಾರ ಜಿಪಂನಲ್ಲಿ ಮುಖ್ಯ ಕಾರ್ಯನಿರ್ವಣಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಜಿ.ಜಗದೀಶ್ ಅವರು ಶಿವಮೊಗ್ಗದ ಸೊರಬದವರು. 2017ರಲ್ಲಿ ಕೆಎಎಸ್‌ನಿಂದ ಐಎಎಸ್‌ಗೆ ಭಡ್ತಿ ಹೊಂದಿದ್ದರು. ಜಗದೀಶ್ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ, 2013-18ರಲ್ಲಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದಲ್ಲಿ ಅರಣ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಅನುಭವಿಯಾಗಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)