varthabharthi

ಕರಾವಳಿ

ಬೆಳ್ತಂಗಡಿ: ನೆರೆ ಸಂತ್ರಸ್ತರೊಂದಿಗೆ ಕಾಂಗ್ರೆಸ್ ನಿಂದ ದೇವರಾಜ ಅರಸು ಪುಣ್ಯಸ್ಮರಣೆ ಕಾರ್ಯಕ್ರಮ

ವಾರ್ತಾ ಭಾರತಿ : 20 Aug, 2019

ಬೆಳ್ತಂಗಡಿ, ಆ.20: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಬೆಳ್ತಂಗಡಿಯ ಕೊಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನೆರೆ ಸಂತ್ರಸ್ತರೊಂದಿಗೆ ರಾಜೀವ ಗಾಂಧಿ ಜನ್ಮದಿನಾಚರಣೆ ಹಾಗೂ ದೇವರಾಜ ಅರಸು ಪುಣ್ಯಸ್ಮರಣೆ ಕಾರ್ಯಕ್ರಮ ಆಚರಿಸಲಾಯಿತು

ಜಿಲ್ಲಾ ಕಾಂಗ್ರಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಕೆ.ವಸಂತ ಬಂಗೇರ. ಜಿಪಂ ಸದಸ್ಯ ಎಂ.ಎಸ್.ಮುಹಮ್ಮದ್, ಶಾಹುಲ್ ಹಮೀದ್, ಶಾಲೆಟ್ ಪಿಂಟೋ ಉಷಾ ಶರತ್, ಹಾಜಿರ, ನಾಗರಾಜ ಲಾಯಿಲ ಹಾಗೂ ಮತ್ತಿತರರು ಉಪಸ್ಥಿತರಿದ್ದರು

ಈ ಸಂದರ್ಭದಲ್ಲಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಮನೆಗಳನ್ನು ಹಾಗೂ ಮನೆಯ ವಸ್ತುಗಳನ್ನು ಕಳೆದುಕೊಂಡ ಕುಟುಂಬಗಳ ಶಾಲೆ ಕಾಲೇಜಿಗೆ ಹೋಗುವ ಮಕ್ಕಳಿಗೆ ತಲಾ ಐದು ಸಾವಿರ ರೂ. ವಿತರಿಸಲಾಯಿತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)