varthabharthi

ಅಂತಾರಾಷ್ಟ್ರೀಯ

ಕಾಶ್ಮೀರ ವಿವಾದ ಅಂತರ್‌ರಾಷ್ಟ್ರೀಯ ನ್ಯಾಯಾಲಯಕ್ಕೆ: ಪಾಕಿಸ್ತಾನ

ವಾರ್ತಾ ಭಾರತಿ : 20 Aug, 2019

ಇಸ್ಲಾಮಾಬಾದ್, ಆ. 20: ಕಾಶ್ಮೀರ ವಿಷಯವನ್ನು ಅಂತರ್‌ರಾಷ್ಟ್ರೀಯ ನ್ಯಾಯಾಲಯಕ್ಕೆ ಒಯ್ಯುವುದಾಗಿ ಪಾಕಿಸ್ತಾನ ಮಂಗಳವಾರ ಹೇಳಿದೆ.

 ಭಾರತವು ಆಗಸ್ಟ್ 5ರಂದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ತೆಗೆದು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ಬಳಿಕ ಪಾಕಿಸ್ತಾನ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಭಾರತದ ಈ ನಿರ್ಧಾರದ ಬಗ್ಗೆ ಪಾಕಿಸ್ತಾನ ಆಕ್ರೋಶ ವ್ಯಕ್ತಪಡಿಸಿದ್ದು, ವಿಶ್ವಸಂಸ್ಥೆಗೂ ದೂರು ಒಯ್ದಿದೆ. ಆದರೆ, ವಿಶ್ವಸಂಸ್ಥೆಯಲ್ಲಿ ಅದು ತನ್ನ ಪ್ರಯತ್ನದಲ್ಲಿ ಯಶಸ್ವಿಯಾಗಿಲ್ಲ.

‘‘ಕಾಶ್ಮೀರ ವಿವಾದವನ್ನು ನಾವು ಅಂತರ್‌ರಾಷ್ಟ್ರೀಯ ನ್ಯಾಯಾಲಯಕ್ಕೆ ಒಯ್ಯಲು ನಿರ್ಧರಿಸಿದ್ದೇವೆ’’ ಎಂದು ಪಾಕಿಸ್ತಾನದ ವಿದೇಶ ಸಚಿವ ಶಾ ಮೆಹ್ಮೂದ್ ಕುರೇಶಿ ‘ಆರಿ ನ್ಯೂಸ್’ ಸುದ್ದಿವಾಹಿನಿಗೆ ತಿಳಿಸಿದರು.

‘‘ಎಲ್ಲ ಕಾನೂನು ಸಾಧ್ಯತೆಗಳನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’’ ಎಂದು ಅವರು ನುಡಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)