varthabharthi

ಕರಾವಳಿ

ಬಂದ್ಯೋಡ್: ಕಾರಿಗೆ ಲಾರಿ ಢಿಕ್ಕಿ; ಉಳ್ಳಾಲ ಶರೀಅತ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಗಂಭೀರ

ವಾರ್ತಾ ಭಾರತಿ : 22 Aug, 2019

ಮಂಜೇಶ್ವರ, ಆ.22: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಉಳ್ಳಾಲ ದರ್ಗಾದ ಶರೀಅತ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಇಂದು ರಾತ್ರಿ 10 ಗಂಟೆ ಸುಮಾರಿಗೆ ಬಂದ್ಯೋಡ್ ಸಮೀಪ ಸಂಭವಿಸಿದೆ.

ಗಾಯಾಳುಗಳನ್ನು ಅರಾಫತ್, ಶಿಹಾನ್, ಜಾಫರ್ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ಬಂದ್ಯೋಡ್‌ನ ಮಲ್ಲಂಗೈ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳು ಬಂದ್ಯೋಡ್ ಸಮೀಪ ಕಾರ್ಯಕ್ರಮ ವೊಂದರಲ್ಲಿ ಭಾಗವಹಿಸಿ ಕಾರಿನಲ್ಲಿ ಉಳ್ಳಾಲದತ್ತ ಹಿಂದಿರುಗುತ್ತಿದ್ದ ವೇಳೆ ಕಾಸರಗೋಡಿನತ್ತ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿ ನಾಲ್ವರಿಗೂ ತೀವ್ರ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಅವರನ್ನು ಬಂದ್ಯೋಡ್‌ನ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)