ಉಡುಪಿ: ಎಡಿಸಿಗೆ ವರ್ಗಾವಣೆ
ಉಡುಪಿ, ಆ.23: ಕಳೆದ ಸುಮಾರು ಒಂದು ವರ್ಷದಿಂದ ಉಡುಪಿಯ ಎಡಿಸಿ ಆಗಿ ಕಾರ್ಯನಿರ್ವಹಿಸುತ್ತಿರುವ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ವಿದ್ಯಾಕುಮಾರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಅವರ ಸ್ಥಾನಕ್ಕೆ ಈಗ ಬೆಂಗಳೂರಿನಲ್ಲಿ ಕಂದಾಯ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಿ.ಸದಾಶಿವ ಪ್ರಭು ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story