ಕ್ಲಬ್ ಮೇಲೆ ಸಿಸಿಬಿ ದಾಳಿ: 22 ಮಂದಿಯ ಬಂಧನ, ನಗದು ಜಪ್ತಿ
ಬೆಂಗಳೂರು, ಆ.24: ಕಾನೂನು ಬಾಹಿರ ಜೂಜಾಟ ನಡೆಸುತ್ತಿದ್ದ ಆರೋಪದಡಿ ಕ್ಲಬ್ವೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು 22 ಮಂದಿಯನ್ನು ಬಂಧಿಸಿ, 51 ಸಾವಿರ ರೂ. ನಗದು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಬನಶಂಕರಿ 3ನೆ ಹಂತದ ಕತ್ರಿಗುಪ್ಪೆ ಮುಖ್ಯರಸ್ತೆಯಲ್ಲಿರುವ ಎಂ.ಎಂ. ಸ್ಪೋರ್ಟ್ಸ್ ಕಲ್ಚರಲ್ ಅಸೋಶಿಯೇಷನ್ ಕ್ಲಬ್ನಲ್ಲಿ ಸದಸ್ಯರಲ್ಲದ ವ್ಯಕ್ತಿಗಳನ್ನು ಸೇರಿಸಿಕೊಂಡು ಜೂಜಾಟ ಆಡಿಸುತ್ತಾರೆಂಬ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳ ವಿರುದ್ದ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
Next Story