varthabharthi

ನಿಮ್ಮ ಅಂಕಣ

ಕಾಮಗಾರಿ ತ್ವರಿತಗತಿಯಲ್ಲಿ ಸಾಗಲಿ

ವಾರ್ತಾ ಭಾರತಿ : 28 Aug, 2019
ಹನುಮೇಶ್ ಭೀಮನಕೆರೆ, ಚಿತ್ರದುರ್ಗ

ಮಾನ್ಯರೇ,

ಚಿತ್ರದುರ್ಗ ನಗರದಲ್ಲಿ ಮುಖ್ಯ ರಸ್ತೆಯಾದ ಬೆಂಗಳೂರು-ದಾವಣಗೆರೆ ರಸ್ತೆಯ ಅಗಲೀಕರಣಕ್ಕೆಂದು ಕಳೆದ ಫೆಬ್ರವರಿ ತಿಂಗಳಿನಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದು ನಗರದ ಮುಖ್ಯ ರಸ್ತೆ ಆಗಿರುವುದರಿಂದ ದಿನನಿತ್ಯ ವಾಹನಗಳು ಇಲ್ಲಿಯೇ ಓಡಾಟ ನಡೆಸುತ್ತಿದ್ದು, ಪಾದಚಾರಿಗಳು ಸೇರಿದಂತೆ ರಸ್ತೆ ಬಳಕೆದಾರರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಸುಮಾರು 5 ತಿಂಗಳಿನಿಂದ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಅಲ್ಲಲ್ಲಿ ರಸ್ತೆಯನ್ನು ಸಂಕುಚಿತಗೊಳಿಸಲಾಗಿದೆ. ಜಿಲ್ಲಾಸ್ಪತ್ರೆ ಇದೇ ಮಾರ್ಗದಲ್ಲಿ ಇರುವುದರಿಂದ ತುರ್ತು ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಆಗಿ ರೋಗಿಗಳಿಗೆ ಸಮಸ್ಯೆ ಉಂಟಾಗುತ್ತಿದೆ. ಮುಖ್ಯ ಸರ್ಕಲ್‌ಗಳಲ್ಲೂ ಇದೇ ಸಮಸ್ಯೆ ಉಂಟಾಗುತ್ತಿದ್ದು, ಜನಸಾಮಾನ್ಯರು ಇದರಿಂದ ಪ್ರತಿನಿತ್ಯ ಕಿರಿಕಿರಿ ಅನುಭವಿಸಬೇಕಾಗುತ್ತದೆ. ಆದ್ದರಿಂದ ರಸ್ತೆ ಅಗಲೀಕರಣದ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡಲಿ.

ಹನುಮೇಶ್ ಭೀಮನಕೆರೆ, ಚಿತ್ರದುರ್ಗ

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)