varthabharthi

ಕರ್ನಾಟಕ

ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧೂ ಅವರಿಂದ ದಸರಾ ಕ್ರೀಡಾಕೂಟ ಉದ್ಘಾಟನೆ: ಸಚಿವ ವಿ.ಸೋಮಣ್ಣ

ವಾರ್ತಾ ಭಾರತಿ : 10 Sep, 2019

ಮೈಸೂರು, ಸೆ.9: ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಈ ಬಾರಿಯ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ ಎಂದು ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅ.1 ರಂದು ಪಿ.ವಿ.ಸಿಂಧೂ ಮೈಸೂರಿಗೆ ಆಗಮಿಸಲಿದ್ದು ಅಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಯುವದಸರಾ ಮತ್ತು ದಸರಾ ಕ್ರೀಡಕೂಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಚಿನ್ನದ ಹುಡುಗಿ ಪಿ.ವಿ.ಸಿಂಧು ಕರ್ನಾಟಕದ ಅತಿಥಿಯಾಗಿ ಆಗಮಿಸಲಿದ್ದಾರೆ. ಅವರ ಆಗಮನಕ್ಕೆ ಎಲ್ಲಾ ಸಿದ್ಧತೆಗಳನ್ನು ಅಧಿಕಾರಿಗಳು ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)