varthabharthi

ಕರ್ನಾಟಕ

ಯುವ ದಸರಾ ಉದ್ಘಾಟನೆಗೆ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧುಗೆ ಆಹ್ವಾನ

ವಾರ್ತಾ ಭಾರತಿ : 10 Sep, 2019

ಬೆಂಗಳೂರು, ಸೆ.10: ಯುವ ದಸರಾ ಉದ್ಘಾಟನೆ ಮಾಡುವಂತೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ಪಿ.ವಿ.ಸಿಂಧುಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಸಿಎಂ ಯಡಿಯೂರಪ್ಪ, ಕರ್ನಾಟಕ ಸರಕಾರವು ವಿಶ್ವವಿಖ್ಯಾತ ದಸರಾ ಹಬ್ಬವನ್ನು ನಡೆಸುತ್ತಿದೆ. ಒಂಬತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ದೇಶ-ವಿದೇಶದಿಂದ ಲಕ್ಷಾಂತರ ಜನರು ಮೈಸೂರಿಗೆ ಭೇಟಿ ನೀಡುತ್ತಾರೆ. 410ನೆ ದಸರಾ ಸಂಭ್ರಮಕ್ಕೆ ವಿವಿಧ ಕ್ಷೇತ್ರದ ಸಾಧಕರು, ಶ್ರೇಷ್ಠ ವ್ಯಕ್ತಿಗಳು ಸಾಕ್ಷಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ್ದೀರಿ. ಲಕ್ಷಾಂತರ ಯುವ ಕ್ರೀಡಾ ಪ್ರತಿಭೆಗಳಿಗೆ ಸ್ಫೂರ್ತಿಯಾಗಿರುವ ನೀವು ಅಕ್ಟೋಬರ್ 1ರಂದು ಯುವ ದಸರಾವನ್ನು ಉದ್ಘಾಟನೆ ಮಾಡಬೇಕು. ನಿಮ್ಮಿಂದ ಯುವ ದಸರಾ ಉದ್ಘಾಟನೆ ಆಗಬೇಕು ಎನ್ನುವುದು ನಮ್ಮ ಬೇಡಿಕೆಯಾಗಿದೆ ಎಂದು ಸಿಎಂ ಯಡಿಯೂರಪ್ಪ, ಪಿ.ವಿ.ಸಿಂಧು ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)