varthabharthi


ರಾಷ್ಟ್ರೀಯ

ಸೆಪ್ಟಿಕ್ ಟ್ಯಾಂಕ್‌ನಲ್ಲಿ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಮೃತ್ಯು

ವಾರ್ತಾ ಭಾರತಿ : 10 Sep, 2019

ಮುಝಫ್ಫರ್‌ಪುರ,ಸೆ.10: ಹೊಸದಾಗಿ ನಿರ್ಮಿಸಲಾಗಿದ್ದ ಸೆಪ್ಟಿಕ್ ಟ್ಯಾಂಕ್ ನಲ್ಲಿ ಇಳಿದಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಿಗ್ಗೆ ಬಿಹಾರದ ಮುಝಫ್ಫರ್‌ಪುರ ಜಿಲ್ಲೆಯ ಮಧುಬನ ಕಾಂತಿ ಗ್ರಾಮದಲ್ಲಿ ಸಂಭವಿಸಿದೆ.

ಟ್ಯಾಂಕಿನಲ್ಲಿ ಕಟ್ಟಲಾಗಿದ್ದ ಅಟ್ಟಣಿಗೆಯನ್ನು ತೆಗೆಯಲು ಮುಂದಾಗಿದ್ದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಒಳಗೆ ಬಿದ್ದಿದ್ದು ವಿಷಾನಿಲ ಸೇವನೆಯಿಂದ ಮೃತಪಟ್ಟಿದ್ದ. ಆತನ ರಕ್ಷಣೆಗಾಗಿ ಟ್ಯಾಂಕಿನಲ್ಲಿ ಇಳಿದಿದ್ದ ಕುಟುಂಬದ ಇತರ ಮೂವರೂ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರು 30ರಿಂದ 35 ವರ್ಷ ವಯೋಮಾನದವರಾಗಿದ್ದಾರೆ.

ಸರಕಾರವು ಮೃತರಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರವನ್ನು ಪ್ರಕಟಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)