varthabharthi

ಕರ್ನಾಟಕ

ನಾಳೆ ಸುಪ್ರೀಂಕೋರ್ಟ್‌ನಲ್ಲಿ 17 ಅನರ್ಹ ಶಾಸಕರ ಅರ್ಜಿ ವಿಚಾರಣೆ

ವಾರ್ತಾ ಭಾರತಿ : 10 Sep, 2019

ಹೊಸದಿಲ್ಲಿ, ಸೆ.10: ಸುಪ್ರೀಂಕೋರ್ಟ್‌ನಲ್ಲಿ ಸೆ.11 ರಂದು ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಯಲಿದ್ದು, ಕೋರ್ಟ್ ಹಾಲ್ ನಂಬರ್ 3ರಲ್ಲಿ 17 ಅನರ್ಹ ಶಾಸಕರ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯಲಿದೆ.

ರಾಜೀನಾಮೆ ನೀಡಿದ 17 ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿದ್ದು, ಈ ಕುರಿತಾಗಿ ಸಲ್ಲಿಕೆಯಾದ ಮೇಲ್ಮನವಿ ಅರ್ಜಿಯ ವಿಚಾರಣೆ ನಾಳೆ(ಸೆ.11) ನಡೆಯಲಿದೆ ಎಂದು ಹೇಳಲಾಗಿದೆ. ಅರ್ಜಿ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ಅನರ್ಹ ಶಾಸಕರು ಆತಂಕಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)