varthabharthi

ಕರ್ನಾಟಕ

ಸಿದ್ದರಾಮಯ್ಯರನ್ನು ಕಾಂಗ್ರೆಸ್ ಕೈ ಬಿಟ್ಟರೂ ನಾವು ಕೈ ಬಿಡುವುದಿಲ್ಲ: ಸಚಿವ ವಿ.ಸೋಮಣ್ಣ

ವಾರ್ತಾ ಭಾರತಿ : 10 Sep, 2019

ಮೈಸೂರು,ಸೆ.10: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕೈ ಬಿಟ್ಟರೂ ನಾವು ಕೈ ಬಿಡಲ್ಲ ಎಂದು ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದರು.

ಅರೆಮನೆ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಂಗಳವಾರ ಮಾತನಾಡಿದ ಅವರು, ದಸರಾ ಆಹ್ವಾನವನ್ನು ಸಿದ್ದರಾಮಯ್ಯ ಅವರಿಗೆ ನೀಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಕೈ ಬಿಟ್ಟರೂ ಸಿದ್ದರಾಮಯ್ಯ ಅವರನ್ನು ನಾವು ಕೈ ಬಿಡುವುದಿಲ್ಲ. ಅವರ ಊರಿನಲ್ಲಿ ನಡೆಯುವ ದಸರಾಗೆ ಬಂದೇ ಬರುತ್ತಾರೆ. ಸಿದ್ದರಾಮಯ್ಯ ಅವರನ್ನು ದಿನ ನಿತ್ಯ ದೂರವಾಣಿ ಮೂಲಕ ಸಂಪರ್ಕಿಸುತ್ತಲೇ ಇರುತ್ತೇನೆ. ಆಹ್ವಾನ ಪತ್ರಿಕೆ ಇನ್ನೂ ಮುದ್ರಣ ಆಗಿಲ್ಲ. ಮುದ್ರಣಗೊಂಡ ನಂತರ ನಿಮ್ಮನ್ನೂ ಜೊತೆಯಲ್ಲೇ ಕರೆದುಕೊಂಡು ಹೋಗಿ ಆಹ್ವಾನಿಸುತ್ತೇನೆ ಎಂದು ಹೇಳಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)