varthabharthi

ಕರ್ನಾಟಕ

ತೆಪ್ಪ ಮಗುಚಿ ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಯುವಕ

ವಾರ್ತಾ ಭಾರತಿ : 10 Sep, 2019

ಸಾಂದರ್ಭಿಕ ಚಿತ್ರ

ಶಿವಮೊಗ್ಗ, ಸೆ. 10: ತೆಪ್ಪ ಮಗುಚಿದ ಪರಿಣಾಮ ಯುವಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಉಳಿದಿಬ್ಬರು ಈಜಿ ದಡ ಸೇರಿದ ಘಟನೆ ಜಿಲ್ಲೆಯ ಭದ್ರಾವತಿ ಪಟ್ಟಣದ ಭದ್ರಾ ನದಿಯಲ್ಲಿ ನಡೆದಿದೆ. 

ತಮೀಮ್ ನೀರಿನಲ್ಲಿ ಕೊಚ್ಚಿ ಹೋದ ಯುವಕನೆಂದು ಗುರುತಿಸಲಾಗಿದೆ. ಜಬಿ ಹಾಗೂ ಅಝರ್ ಎಂಬುವರು ಅಪಾಯದಿಂದ ಪಾರಾಗಿದ್ದಾರೆ. ಮೂವರು ಭದ್ರಾ ನದಿಯಲ್ಲಿ ತೆಪ್ಪದಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)