varthabharthi

ಕರ್ನಾಟಕ

ನನ್ನನ್ನು ಯಾರೂ ಏನು ಮಾಡೋಕಾಗಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ವಾರ್ತಾ ಭಾರತಿ : 11 Sep, 2019

ರಾಮನಗರ, ಸೆ.11: ಮುಂದೆ ಕುಮಾರಸ್ವಾಮಿಯನ್ನು ಬಂಧಿಸುತ್ತಾರೆಂದು ಹೇಳುತ್ತಿದ್ದಾರೆ. ಆದರೆ ಈ ಕುಮಾರಸ್ವಾಮಿಯನ್ನು ಯಾರು ಏನು ಮಾಡೋಕಾಗಲ್ಲ ಎಂದು ಬಿಜೆಪಿ ನಾಯಕರಿಗೆ ಪರೋಕ್ಷವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು.

ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ಕುರಿತು ಚನ್ನಪಟ್ಟಣದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಚನ್ನಪಟ್ಟಣದಲ್ಲಿನ ಕಾರ್ಯಕ್ರಮ ಈ ಮೊದಲೇ ನಿಗದಿಯಾಗಿತ್ತು. ಹಾಗಾಗಿ ಬೆಂಗಳೂರಿನ ಪ್ರತಿಭಟನೆಗೆ ನನಗೆ ಆಹ್ವಾನವಿರಲಿಲ್ಲ. ಆದರೂ ಕೂಡ ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ನನಗೆ ಮೊದಲೇ ಆಹ್ವಾನ ನೀಡಿದ್ದರೆ ನಾನು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದೆ ಎಂದರು.

ಇನ್ನು ಕಾರ್ಯಕ್ರಮದ ಜಾಹಿರಾತಿನಲ್ಲಿ ನನ್ನ ಫೋಟೋ ಕೂಡ ಹಾಕಿದ್ದಾರಂತೆ. ಮುಂದೆ ಕುಮಾರಸ್ವಾಮಿಯನ್ನು ಬಂಧಿಸುತ್ತಾರೆಂದು. ಆದರೆ ಈ ಕುಮಾರಸ್ವಾಮಿಯನ್ನ ಯಾರು ಏನು ಮಾಡೋಕಾಗಲ್ಲ. ನನ್ನನ್ನ ಪ್ರಕರಣದಲ್ಲಿ ಸಿಲುಕಿಸಲು ಆಗಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನುಡಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)